ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯ ಮೇಲೆ ಅತ್ಯಾಚಾರ: ಪ್ರಕರಣವನ್ನು ಹೊಸದಾಗಿ ಪರಿಗಣಿಸಲು ಹೈಕೋರ್ಟ್‌ ನಿರ್ದೇಶನ

Published 22 ಏಪ್ರಿಲ್ 2024, 16:27 IST
Last Updated 22 ಏಪ್ರಿಲ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ‘ಅಪರಾಧ ಎಸಗಿದ ಸಮಯದಲ್ಲಿ ನಾನು ಅಪ್ರಾಪ್ತ ವಯಸ್ಸಿನವನಾಗಿದ್ದೆ ಎಂದು ಆರೋಪಿಯು ಯಾವುದೇ ಸಮಯದಲ್ಲಾದರೂ ಮನವಿ ಸಲ್ಲಿಸಬಹುದು’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವೊಂದರಲ್ಲಿ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಕಂಪ್ಲಿಯ 23 ವರ್ಷದ ಯುವಕನೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರು, ‘ಅಪರಾಧ ಎಸಗಿದಾಗ ನನಗೆ ವಯಸ್ಸು 15 ವರ್ಷವಾಗಿತ್ತು. ಹಾಗಾಗಿ ನನ್ನನ್ನು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ ಅಧಿನಿಯಮ–2000) ಅಪರಾಧ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಬೇಕು’ ಎಂದು ಕೋರಿದ್ದರು. ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ಬಾಲ ನ್ಯಾಯ ಮಂಡಳಿಗೆ ನಿರ್ದೇಶಿಸಿದೆ. ಅಂತೆಯೇ, ಅರ್ಜಿದಾರರ ವಿರುದ್ಧ ಪೋಕ್ಸೊ ಕಾಯ್ದೆಯಡಿ ನಡೆಸಲಾದ ವಿಚಾರಣೆ ಅಮಾನತುಗೊಳಿಸುವಂತೆಯೂ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT