ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಡುಗೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಶಾಸಕ ರೇವಣ್ಣಗೆ ಷರತ್ತುಬದ್ಧ ಜಾಮೀನು

ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Published 20 ಮೇ 2024, 9:57 IST
Last Updated 20 ಮೇ 2024, 9:57 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಲಾಗಿದ್ದ ಆದೇಶವನ್ನು "ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ"ಯ (42ನೇ ಎಸಿಎಂಎಂ ಕೋರ್ಟ್‌) ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ. ಪ್ರೀತ್ ಅವರು ಸೋಮವಾರ ಪ್ರಕಟಿಸಿದರು.

₹ 5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡುವುದೂ ಸೇರಿದಂತೆ ಇನ್ನಿತರ ಷರತ್ತುಗಳನ್ನು ವಿಧಿಸಲಾಗಿದೆ.

ಈ ಮೊದಲು ಇದೇ ನ್ಯಾಯಾಲಯ ನೀಡಿದ್ದ ಮಧ್ಯಂತರ ಜಾಮೀನಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಂತೆಯೇ ಈ ಅರ್ಜಿಯು, ‘ಪರಿಶೀಲನೆಗೆ ಅರ್ಹವೊ ಅಲ್ಲವೋ’ (ಮೇಂಟೇನೆಬಿಲಿಟಿ) ಎಂಬ ಆಕ್ಷೇ‍ಪದ ಮೇಲಿನ ವಾದ-ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT