ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಎಸ್ ಶಿಕ್ಷಣ ಟ್ರಸ್ಟ್‌ಗೆ ರಶ್ಮಿ ಮಹೇಶ್‌ ನೇಮಕ

Published 29 ನವೆಂಬರ್ 2023, 22:43 IST
Last Updated 29 ನವೆಂಬರ್ 2023, 22:43 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಎಸ್ ಶಿಕ್ಷಣ ಟ್ರಸ್ಟ್‌ಗೆ (ಬಿಎಂಎಸ್‌ಇಟಿ) ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.

ಟ್ರಸ್ಟ್‌ನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಆರೋಪದ ವಿಚಾರಣೆಗಾಗಿ ತನಿಖಾ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದಕ್ಕೆ ಪೂರಕವಾಗಿ ಟ್ರಸ್ಟ್‌ನ ಹಣಕಾಸು ಚಟುವಟಿಕೆಗಳ ಮೇಲೆ ತಕ್ಷಣದಿಂದಲೇ ನಿಗಾ ವಹಿಸಲು ಹಿರಿಯ ಐಎಎಸ್‌ ಅಧಿಕಾರಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಕಳೆದ ವರ್ಷ ಅಧಿವೇಶನದಲ್ಲಿ ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ನ ಅವ್ಯವಹಾರದ ಆರೋಪಗಳನ್ನು ಪ್ರಸ್ತಾಪ ಮಾಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT