ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

90 ವರ್ಷ ಮೇಲ್ಪಟ್ಟವರ ಮನೆಗೆ ಪಡಿತರ: ಸಚಿವ ಕೆ.ಎಚ್‌. ಮುನಿಯಪ್ಪ

Published 6 ನವೆಂಬರ್ 2023, 11:31 IST
Last Updated 6 ನವೆಂಬರ್ 2023, 11:31 IST
ಅಕ್ಷರ ಗಾತ್ರ

ಮೈಸೂರು: ರಾಜ್ಯದಲ್ಲಿ ‘ಅನ್ನ ಸುವಿಧಾ’ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, 90 ವರ್ಷ ಮೇಲ್ಪಟ್ಟವರ ಮನೆಗೆ ಪಡಿತರವನ್ನು ತಲುಪಿಸಲಾಗುತ್ತಿದೆ ಎಂದು ಆಹಾರ ಪೂರೈಕೆ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಮಾಹಿತಿ ನೀಡಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ 90 ಸಾವಿರ ಹಿರಿಯರಿಗೆ ಹೀಗೆ ಮನೆಗೆ ಪಡಿತರ ವಿತರಣೆ ವ್ಯವಸ್ಥೆ ಪ್ರಗತಿಯಲ್ಲಿದೆ. ಇದರಿಂದಾಗಿ ಅವರು ಪಡಿತರ ಅಂಗಡಿಗಳಿಗೆ ಅಲೆಯುವುದು ತಪ್ಪಲಿದೆ. ದೇಶದಲ್ಲಿಯೇ ಇದೊಂದು ವಿನೂತನ ಯೋಜನೆ ಆಗಿದೆ’ ಎಂದು ಅವರು ವಿವರಿಸಿದರು. ‘ಅಂಗವಿಕಲರಿಗೂ ಇದೇ ಮಾದರಿಯಲ್ಲಿ ಮನೆಗೆ ಪಡಿತರ ವಿತರಣೆ ಬಗ್ಗೆ ಚಿಂತಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT