ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಯು: ನೂತನ ಕುಲಪತಿ ರಾಮಚಂದ್ರಗೌಡ

Last Updated 1 ಜುಲೈ 2019, 12:31 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯನ್ನಾಗಿಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಪ್ರೊ.ಎಂ. ರಾಮಚಂದ್ರಗೌಡ ಅವರನ್ನು ರಾಜ್ಯಪಾಲ ವಜೂಭಾಯಿ ಆರ್.ವಾಲಾ ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಅವರ ಅಧಿಕಾರದ ಅವಧಿ 4 ವರ್ಷಗಳ ಅವಧಿವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ.

ಪ್ರೊ.ಎಸ್.ಬಿ. ಹೊಸಮನಿ ಅವರ ಅಧಿಕಾರದ ಅವಧಿ ಜೂನ್ 16ರಂದು ಮುಗಿದಿತ್ತು. ಹಿರಿಯ ಡೀನ್ ಪ್ರೊ.ಎಸ್.ಎಂ. ಹುರಕಡ್ಲಿ ಪ್ರಭಾರ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶೋಧನಾ ಸಮಿತಿಯ ಶಿಫಾರಸು ಆಧರಿಸಿ, ಕೆಲವೇ ದಿನಗಳಲ್ಲಿ ನೂತನ ಕುಲಪತಿ ಆಯ್ಕೆ ಪ್ರಕ್ರಿಯೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT