ಬೆಂಗಳೂರು: ‘ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪುನರ್ ಆರಂಭಿಸಲು ಸಿದ್ಧತೆ ನಡೆಸಲಾಗಿದೆ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

‘ಈಗಾಗಲೇ ಆಂಧ್ರ ಪ್ರದೇಶಕ್ಕೆ ಸಾರಿಗೆ ಸಂಸ್ಥೆ ಬಸ್‍ಗಳು ಕಾರ್ಯಾಚರಣೆ ಮಾಡುತ್ತಿವೆ. ಉಳಿದ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಅಲ್ಲಿನ ಸರ್ಕಾರಗಳ ಅನುಮತಿ ದೊರೆಯಬೇಕು, ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಶೀಘ್ರವೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

‘ಲಾಕ್‍ಡೌನ್‌ಗೂ ಮುನ್ನ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ 2,500 ಬಸ್‍ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದವು. ಅದೇ ರೀತಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.