ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಕ್ಸಲ್ ಪುನರ್ವಸತಿ ಸಮಿತಿ ಪುನರ್‌ರಚನೆ

Published 14 ಮಾರ್ಚ್ 2024, 16:39 IST
Last Updated 14 ಮಾರ್ಚ್ 2024, 16:39 IST
ಅಕ್ಷರ ಗಾತ್ರ

ಬೆಂಗಳೂರು: ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಅಡಿ ಶರಣಾದ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ರಾಜ್ಯಮಟ್ಟದ ಸಮಿತಿಯನ್ನು ಸರ್ಕಾರ ಪುನರ್‌ರಚಿಸಿದೆ. 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿಗೆ ಸಾಹಿತಿ ಬಂಜಗೆರೆ ಜಯಪ್ರಕಾಶ್, ಪತ್ರಕರ್ತ ಬಿ. ಪಾರ್ವತೀಶ, ಶಿವಮೊಗ್ಗದ ವಕೀಲ ಕೆ.ಪಿ. ಶ್ರೀಪಾಲ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. ನಕ್ಸಲ್‌ ನಿಗ್ರಹ ದಳದ ಎಡಿಜಿಪಿ ಸಂಚಾಲಕರಾಗಿರುತ್ತಾರೆ.

ಒಳಾಡಳಿತ ಇಲಾಖೆ ಕಾರ್ಯದರ್ಶಿ, ಪೊಲೀಸ್‌ ಮಹಾ ನಿರ್ದೇಶಕ, ರಾಜ್ಯ ಗುಪ್ತವಾರ್ತೆ ನಿರ್ದೇಶಕ, ಉಪ ನಿರ್ದೇಶಕ, ಆಂತರಿಕ ಭದ್ರತಾ ವಿಭಾಗದ ಮುಖ್ಯಸ್ಥರು ಪದ ನಿಮಿತ್ತ ಸದಸ್ಯರಾಗಿರುತ್ತಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT