ಶ್ವಾಸಕೋಶದ ಸೋಂಕಿನಿಂದಾಗಿ ಉಸಿರಾಟದ ಸಮಸ್ಯೆ ಎದುರಿಸಿದ್ದ ಅವರು, ಕಳೆದ ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಏ. 29ರಂದು ಮಣಿಪಾಲ್ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ನಾಲ್ಕು ತಿಂಗಳು ಒದಗಿಸಲಾದ ನಿರಂತರ ಚಿಕಿತ್ಸೆಯಿಂದ ಅವರು ಚೇತರಿಸಿಕೊಂಡಿದ್ದಾರೆ.