ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 2 ಸಾವಿರ ನರ್ಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಪ್ರಕಟಿಸಿದರು.

ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ 12 ನರ್ಸ್‌ಗಳಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ.

ನರ್ಸ್‌ಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಇದರಿಂದ ಅರ್ಹರು ಆಯ್ಕೆಯಾಗಲು ಸಾಧ್ಯವಾಗಲಿದೆ ಎಂದರು.

ನರ್ಸಿಂಗ್ ಪದವಿ ಹಾಗೂ ನರ್ಸಿಂಗ್ ಡಿಪ್ಲೊಮೊ ಪಡೆದವರ ನಡುವೆ ಯಾವುದೇ ತಾರತಮ್ಯ ಇಲ್ಲದೆ ಉದ್ಯೋಗಕ್ಕೆ ನೇಮಿಸಿಕೊಂಡು ಒಂದೇ ಮಾದರಿಯಲ್ಲಿ ವೇತನ ನೀಡಲಾಗುತ್ತಿದೆ.ಹಾಗಾಗಿ ನೇಮಕಾತಿಗೆ ಸಂಬಂಧಿಸಿದಂತೆ ಇಬ್ಬರಿಗೂ ಪ್ರತ್ಯೇಕ ನಿಯಮಾವಳಿ ರೂಪಿಸಲಾಗುತ್ತಿದೆ. ಇದರಿಂದ ವೇತನ ನಿಗದಿಯಲ್ಲೂ ವ್ಯತ್ಯಾಸವಾಗಲಿದೆ ಎಂದು ಹೇಳಿದರು.

ಸರ್ಕಾರದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ನರ್ಸಿಂಗ್ ಹಾಗೂ ಇತರ ವೈದ್ಯಕೀಯ ಕೋರ್ಸ್‌ಗಳನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಐವನ್ ನಿಗ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.