ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ನೇಮಕ: ನಾಳೆಯಿಂದ ಅರ್ಜಿ ಸಲ್ಲಿಕೆ

Published 24 ಆಗಸ್ಟ್ 2023, 16:16 IST
Last Updated 24 ಆಗಸ್ಟ್ 2023, 16:16 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದ್ದು, ಅರ್ಜಿ ಸಲ್ಲಿಕೆಗೆ ಸೆ.2ರವರೆಗೆ ಅವಕಾಶ ನೀಡಲಾಗಿದೆ.

ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ.

ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರಾಗಲು ಅರ್ಹತೆ ಇರುವವರು ಆ.25ರಿಂದಲೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸೆ.4ರಂದು ಮೆರಿಟ್‌ ಪಟ್ಟಿ ಪ್ರಕಟಿಸಲಗುವುದು. ಸೆ.11ರಿಂದ 15ರವರೆಗೆ ಕಾಲೇಜುಗಳ ಆಯ್ಕೆಗೆ ಕೌನ್ಸೆಲಿಂಗ್‌ ನಡೆಸಲಾಗುವುದು. 16ರಂದು ಆಯ್ಕೆಯಾದವರ ಅಂತಿಮಪಟ್ಟಿ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.

ಯಾವುದೇ ಕಾಲೇಜುಗಳಲ್ಲಿ ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆಗಳು ಖಾಲಿ ಇದ್ದರೆ ಅತಿಥಿ ಉಪನ್ಯಾಸಕರ ನಿಯಮದಂತೆ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT