ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷಪುನರಾರಂಭವಾಗುವುದು ವಿಳಂಬವಾಗುತ್ತಿರುವಂತೆಯೇ, ದ್ವಿತೀಯ ಪಿಯು ಪಠ್ಯಕ್ರಮವನ್ನು ಶೇ 40ರಷ್ಟು ಕಡಿತಗೊಳಿಸುವ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ.

ಇಲಾಖೆಯು ಈಗಾಗಲೇ ಶೇ 30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿತ್ತು. ಕೇಂದ್ರ ಶಿಕ್ಷಣ ಸಚಿವಾಲಯದ ಸೂಚನೆಯನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಇನ್ನೂ ಶೇ 10ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸುವ ಕುರಿತು ಇಲಾಖೆ ಚರ್ಚೆ ನಡೆಸುತ್ತಿದೆ.

‘ಕಾಲೇಜುಗಳು ಪುನರಾರಂಭವಾಗುವ ದಿನದ ಬಗ್ಗೆ ಇನ್ನೂ ಅನಿಶ್ಚಿತತೆ ಇದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕಾಲೇಜುಗಳು ಪ್ರಾರಂಭವಾಗುವುದು ತಡವಾಗಬಹುದು. ವಿಳಂಬವಾದರೆ, ಪಠ್ಯಕ್ರಮ ಮತ್ತಷ್ಟು ಕಡಿತಗೊಳಿಸುವುದು ಅನಿವಾರ್ಯವಾಗುತ್ತದೆ. ಈ ಕುರಿತು ಚರ್ಚೆ ನಡೆಯುತ್ತಿದ್ದು, ಒಟ್ಟು ಶೇ 40ರಷ್ಟು ಪಠ್ಯಕ್ರಮ ಕಡಿತಗೊಳಿಸುವುದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಶೀಘ್ರದಲ್ಲಿಯೇ ಬರಬಹುದು’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಬೆಂಗಳೂರು ವಿವಿ ಚಿಂತನೆ: ಬೆಂಗಳೂರು ವಿಶ್ವವಿದ್ಯಾಲಯ ಕೂಡ ಪದವಿ ಮತ್ತು ಸ್ನಾತಕೋತ್ತರ ಪದವಿ ಪಠ್ಯಕ್ರಮವನ್ನು ಕಡಿತಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಯುಜಿಸಿಯ ಇತ್ತೀಚಿನ ನಿರ್ದೇಶನದ ಪ್ರಕಾರ, ನ.1ರಿಂದ ಮೊದಲ ಸೆಮಿಸ್ಟರ್ನ ತರಗತಿಗಳನ್ನು ಪ್ರಾರಂಭಿಸಬೇಕಾಗಿದೆ. ಈ ಕುರಿತು ಸಭೆಗಳನ್ನು ನಡೆಸಿರುವ ಬೆಂಗಳೂರು ವಿಶ್ವವಿದ್ಯಾಲಯ, ಪಠ್ಯಕ್ರಮವನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.