ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ಪೀಠವು ತೀರ್ಪು ಕಾಯ್ದಿರಿಸಿದೆ. ರಾಜ್ಯ ಸರ್ಕಾರ ಹಾಗೂ ದರ್ಶನ್ ಪರ ವಕೀಲರ ವಾದ ಆಲಿಸಿದ್ದ ಪೀಠವು, ಉಳಿದ ಆರೋಪಿಗಳಿಗೆ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿತ್ತು. ಪ್ರಕರಣದ ಆರನೇ ಆರೋಪಿ ಜಗದೀಶ್ ಹಾಗೂ ಏಳನೇ ಆರೋಪಿ ಅನುಕುಮಾರ್ ಪರವಾಗಿ ವಕೀಲ ಎಚ್.ಚಂದ್ರಶೇಖರ್ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ʼನಾವಿಬ್ಬರು ಆಟೊ ಚಾಲಕರಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ನಟ ದರ್ಶನ್ ಜತೆಗೆ ಗುರುತಿಸಿಕೊಂಡಿಲ್ಲ. ಘಟನೆ ನಂತರ ಶೆಡ್ ಹೊರಗೆ ದರ್ಶನ್ ಜತೆಗೆ ನಾವಿರುವ ಚಿತ್ರವನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳೆಂದು ಬಿಂಬಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆʼ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ʼರೇಣುಕಸ್ವಾಮಿಯನ್ನು ನಾವಿಬ್ಬರು ಚಿತ್ರದುರ್ಗದಿಂದ ಕರೆದುಕೊಂಡು ಬಂದಿದ್ದೆವು ಎಂದು ನಾಲ್ಕನೇ ಆರೋಪಿ ಹೇಳಿಕೆ ನೀಡಿದ್ದಾರೆ. ಉಳಿದಂತೆ, ಅವರ ಯೋಜನೆಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲʼ ಎಂದು ಅವರು ಹೇಳಿದ್ದಾರೆ.

ಜಾಮೀನು ರದ್ದು ಮಾಡಬಾರದು ಎಂದು ಕೋರಿ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಮೇ 20ರಂದು ಪ್ರಮಾಣಪತ್ರ ಸಲ್ಲಿಸಿದ್ದರು. ಎಲ್ಲ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಬಲ ಪುರಾವೆಗಳಿದ್ದು, ಕೂಡಲೇ ಜಾಮೀನು ರದ್ದು ಮಾಡಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರವು ಮೇ 15ರಂದು ಪ್ರಮಾಣಪತ್ರ ಸಲ್ಲಿಸಿತ್ತು.
.ದರ್ಶನ್ ಫ್ಯಾನ್ಸ್ ಮೆಸೇಜ್ಗೂ,ರೇಣುಕಸ್ವಾಮಿ ಮೆಸೇಜ್ಗೂ ವ್ಯತ್ಯಾಸ ಇಲ್ಲ: ರಮ್ಯಾ.ಸುಪ್ರೀಂ ಕೋರ್ಟ್ ಭರವಸೆಯ ಬೆಳಕು|ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ:ರಮ್ಯಾ.ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ಗೆ ಜೈಲೋ? ಬೇಲೋ? ತೀರ್ಪು ಕಾಯ್ದಿರಿಸಿದ SC.ರೇಣುಕಸ್ವಾಮಿ ಕೊಲೆ: ನಟ ದರ್ಶನ್ ಜಾಮೀನಿಗೆ ಸುಪ್ರೀಂಕೋರ್ಟ್ ಆಕ್ಷೇಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.