ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲಿನತ್ತ ನಟ ದರ್ಶನ್

Published : 29 ಆಗಸ್ಟ್ 2024, 1:36 IST
Last Updated : 29 ಆಗಸ್ಟ್ 2024, 1:36 IST
ಫಾಲೋ ಮಾಡಿ
Comments

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ನಸುಕಿನ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿ‌ನತ್ತ ಕರೆದೊಯ್ಯಲಾಯಿತು.

ಬಿಗಿ ಭದ್ರತೆ ನಡುವೆ ಪೊಲೀಸ್ ಟಿ.ಟಿ‌ ವಾಹನದಲ್ಲಿ ‌ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸ್‌ ಭದ್ರತೆ‌ ಕೈಗೊಳ್ಳಲಾಗಿದೆ.

ಆರೋಪಿ ಖ್ಯಾತ ನಟನಾಗಿದ್ದು ಕರೆದೊಯ್ಯುವ ಮಾರ್ಗದಲ್ಲಿ ಅಭಿಮಾನಿಗಳು ಜಮಾವಣೆಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ನಸುಕಿನ ವೇಳೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕ ಮಾರ್ಗವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು.‌

ಉಳಿದ ವಿಚಾರಣಾಧೀನ ಕೈದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ,‌ ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ‌ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT