ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ವಿಚಾರಣೆಗೆ ಹಾಜರಾದರು.

ದರ್ಶನ್ ಹಾಗೂ ಇತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಆರೋಪಿ ಪ್ರದೂಷ್ ರಾವ್ ಆಕ್ಷೇಪಣಾ ಅರ್ಜಿ ಸಲ್ಲಿಸಿದರೆ, ಉಳಿದ ಆರೋಪಿಗಳು ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ನ್ಯಾಯಾಲಯವು, ಆ.30ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.