ಬಳ್ಳಾರಿ: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್, ತಮಗೆ ಟಿವಿ ಒದಗಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
‘ದರ್ಶನ್ ಮನವಿಗೆ ಸಮ್ಮತಿ ಸಿಕ್ಕಿದ್ದು, ಒಂದೆರಡು ದಿನಗಳಲ್ಲಿ ಟಿವಿ ಲಭ್ಯವಾಗಲಿದೆ. ಕಾರಾಗೃಹದ ಹೊರ ಆವರಣದಲ್ಲಿ 10 ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಭದ್ರತೆ ಹೆಚ್ಚಿಸುವ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳ ಸಂಖ್ಯೆ ಹೆಚ್ಚಿಸಲಾಗಿದೆ’ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.