ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಅವರ ಪಾತ್ರದ ಕುರಿತು ವಿವರಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಇಬ್ಬರ ಪಾತ್ರವು ದೃಢವಾಗಿದೆ. ಕೊಲೆಯಾದ ರೇಣುಕಸ್ವಾಮಿ ತನ್ನ ನಗ್ನ ಫೋಟೊ ಹಾಗೂ ಅಶ್ಲೀಲ ಸಂದೇಶಗಳನ್ನು ಪವಿತ್ರಾಗೌಡ ಅವರಿಗೆ ಕಳುಹಿಸಿರುವುದನ್ನು ಉಲ್ಲೇಖಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಮಂದಿ ವಿರುದ್ಧ ಇಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು.
ರಟ್ಟಿನ ಬಾಕ್ಸ್‌ನಲ್ಲಿ ಮುದ್ರಿತ ಪ್ರತಿಗಳನ್ನು ತಂದ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದೆ. 3991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಒಟ್ಟು 20 ಪ್ರತಿಗಳನ್ನು ಸಲ್ಲಿಸಲಾಗಿದೆ ಎಂದು ಮೂಲಗಳು ಹೇಳಿವೆ.