ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.
ರಟ್ಟಿನ ಬಾಕ್ಸ್‌ನಲ್ಲಿ ಮುದ್ರಿತ ಪ್ರತಿಗಳನ್ನು ತಂದ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದೆ. 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಒಟ್ಟು 20 ಪ್ರತಿಗಳನ್ನು ಸಲ್ಲಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾದಾರರ ಹೇಳಿಕೆ ಸಹಿತ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.