ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ನಟ ದರ್ಶನ್, ಅವರ ಗೆಳತಿ ಪವಿತ್ರಾಗೌಡ ಸೇರಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆ ಪೈಕಿ ಐವರು ಗುರುವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದರು.

ಯಾವಾಗ ಏನಾಗಿತ್ತು...?

2024

ಜೂನ್ 8: ಚಿತ್ರದುರ್ಗದಿಂದ ರೇಣುಕಸ್ವಾಮಿ ಅಪಹರಣ, ಪಟ್ಟಣಗೆರೆಯ ಶೆಡ್ಗೆ ಕರೆತಂದು ಹಲ್ಲೆ, ಕೊಲೆ
ಜೂನ್ 9: ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್ಮೆಂಟ್ನ ಮೋರಿ ಬಳಿ ಮೃತದೇಹ ಪತ್ತೆ, ಕೊಲೆ ಪ್ರಕರಣ ದಾಖಲು
ಜೂನ್ 11: ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಬಂಧನ
ಜೂನ್ 22: ಜೈಲು ಸೇರಿದ್ದ ದರ್ಶನ್, ಪವಿತ್ರಾಗೌಡ
ಆಗಸ್ಟ್ 24: ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ ಹೊರಗೆ ಕುರ್ಚಿಯಲ್ಲಿ ಕುಳಿತು ಟೀ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ಹರಟೆ ಹೊಡೆಯುತ್ತಿದ್ದ ದರ್ಶನ್, ರೌಡಿ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ, ದರ್ಶನ್ ವ್ಯವಸ್ಥಾಪಕ ನಾಗರಾಜ್ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಆಗಸ್ಟ್ 26: ಕರ್ತವ್ಯ ಲೋಪದ ಆರೋಪದಡಿ ಜೈಲಿನ ಮುಖ್ಯ ಅಧೀಕ್ಷಕ, ಅಧೀಕ್ಷಕ ಮತ್ತು ಸಿಬ್ಬಂದಿ ಸೇರಿ ಒಂಬತ್ತು ಮಂದಿಯನ್ನು ಅಮಾನತು ಮಾಡಿದ್ದ ರಾಜ್ಯ ಸರ್ಕಾರ, ಮೂರು ಪ್ರತ್ಯೇಕ ಎಫ್ಐಆರ್ ದಾಖಲು
ಆಗಸ್ಟ್ 27: ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ, ಉಳಿದ ಆರೋಪಿಗಳೂ ರಾಜ್ಯದ ಬೇರೆ ಬೇರೆ ಕಾರಾಗೃಹಕ್ಕೆ ಸ್ಥಳಾಂತರ
ಸೆಪ್ಟೆಂಬರ್ 4: 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ
ಅಕ್ಟೋಬರ್ 30: ದರ್ಶನ್ಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ಬಳಿಕ ನಿಯಮಿತ ಜಾಮೀನು ಮಂಜೂರು
ನವೆಂಬರ್ 17: ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಸಮ್ಮತಿ
ಡಿಸೆಂಬರ್ 4: ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ

2025

ಮೇ 21: ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಕೆ
ಜುಲೈ 24: ದರ್ಶನ್ ಮತ್ತು ಇತರೆ ಏಳು ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ, ಆದೇಶವನ್ನು ಕಾಯ್ದಿರಿಸಿತ್ತು
ಆಗಸ್ಟ್ 14: ಏಳು ಆರೋಪಿಗಳ ಜಾಮೀನು ಆದೇಶ ರದ್ದು
.Renukaswamy Murder | ಜಾಮೀನು ಆದೇಶ ರದ್ದು: ದರ್ಶನ್, ಪವಿತ್ರಾ ಮತ್ತೆ ಜೈಲಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.