ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ದಿನದೊಳಗೆ ಕೇಂದ್ರಕ್ಕೆ ವರದಿ: ಪ್ರವಾಹ ಅಧ್ಯಯನ ತಂಡದಿಂದ ಮಾಹಿತಿ

ಅತಿವೃಷ್ಟಿ: ಹಾನಿಗೊಳಗಾದ ಪ್ರದೇಶಗಳಿಗೆ ಅಧ್ಯಯನ ತಂಡ ಭೇಟಿ
Last Updated 8 ಸೆಪ್ಟೆಂಬರ್ 2022, 19:37 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಪೂರ್ಣಗೊಂಡ ನಂತರ 10 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ನಷ್ಟದ ಬಗ್ಗೆ ವಿಸ್ತೃತ ವರದಿ ಸಲ್ಲಿಸುತ್ತೇವೆ’ ಎಂದು ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡದ ಸದಸ್ಯ ಅಶೋಕಕುಮಾರ ಹೇಳಿದರು.

ಅತಿವೃಷ್ಟಿಯಿಂದಾಗಿ ಹಾನಿಗೊಳ ಗಾದ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರಿಗೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿ ಗಾರರ ಜೊತೆ ಅವರು ಮಾತನಾಡಿದರು.

‘ಅತಿವೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಆಗಿರುವ ಹಾನಿಯನ್ನು ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲಾಡಳಿತವು ಕಳೆದ ಎರಡು ಮೂರು ದಿನಗಳಲ್ಲಿ ನಷ್ಟದ ಮಾಹಿತಿಯನ್ನು ಕ್ರೋಡೀಕರಿಸಿ ಒದಗಿಸಲಿದೆ. ಎಲ್ಲಾ ಮಾಹಿತಿಯನ್ನು ಮೌಲ್ಯಮಾಪನ ಮಾಡಿ ಹತ್ತು ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ತಂಡವು ವರದಿ ಸಲ್ಲಿಸಲಿದೆ’ ಎಂದು ತಿಳಿಸಿದರು.

ವಿಜಯಪುರ, ಧಾರವಾಡ, ಉತ್ತರ ಕನ್ನಡ ಹಾಗೂ ಗದಗ ಜಿಲ್ಲೆಯ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೂ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT