ಮಡಿಕೇರಿ: ಲಾಕ್‌ಡೌನ್ ಸಂದರ್ಭದಲ್ಲಿ, ದಿನಸಿ ಖರೀದಿಗೆ ಸಮಯ ನಿಗದಿ ಮಾಡಿದಂತೆಯೇ ಎಂ.ಆರ್.ಪಿ ಔಟ್‌ಲೆಟ್‌ಗಳನ್ನು ತೆರೆದು ಮದ್ಯವನ್ನು ಮನೆಗೆ ಕೊಂಡೊಯ್ಯಲು ಅವಕಾಶ ನೀಡಬೇಕು ಎಂಬ ಮದ್ಯಪ್ರಿಯರ ಬೇಡಿಕೆಗೆ ಜಿಲ್ಲೆಯ ಇಬ್ಬರು ಜನಪ್ರತಿನಿಧಿಗಳೂ ಧ್ವನಿಗೂಡಿಸಿದ್ದಾರೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಇಬ್ಬರು ಜನಪ್ರತಿನಿಧಿಗಳೂ ಮದ್ಯದಂಗಡಿ ತೆರೆಯುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಮೂರು ದಿನ ದಿನಸಿ ಹಾಗೂ ತರಕಾರಿ ಖರೀದಿಗೆ ಅವಕಾಶ ನೀಡಲಾಗಿದೆ. ಆಗ ಮದ್ಯ ಖರೀದಿಗೂ ಅವಕಾಶ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟರು. ಅದಕ್ಕೆ ಸಭೆಯಲ್ಲಿದ್ದ ಹಿರಿಯ ಅಧಿಕಾರಿಯೊಬ್ಬರು, ‘ಸರ್ಕಾರವೇ ತೀರ್ಮಾನ ತೆಗೆದುಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ಈ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿ ಚರ್ಚೆಗೆ ವಿರಾಮ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.