ಬೆಂಗಳೂರು: ಬೆಳಗಾವಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಾಹಿತಿ ತಂತ್ರಜ್ಞಾನ ಪಾರ್ಕ್‌ಗೆ (ಐ.ಟಿ ಪಾರ್ಕ್) ಅಗತ್ಯ ಇರುವ ರಕ್ಷಣಾ ಇಲಾಖೆಯ 750 ಎಕರೆ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟುಕೊಡುವಂತೆ ಐ.ಟಿ/ಬಿ.ಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಸಿಂಗ್ ಅವರ ನವದೆಹಲಿಯ ನಿವಾಸಕ್ಕೆ ಶನಿವಾರ ಭೇಟಿ ನೀಡಿದ್ದ ಅಶ್ವತ್ಥನಾರಾಯಣ ಈ ಪಾರ್ಕಿನ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು.

ಈ ಭೂಮಿಯನ್ನು ಕರ್ನಾಟಕ ಸರ್ಕಾರಕ್ಕೆ ಬಿಟ್ಟುಕೊಟ್ಟರೆ ಐ.ಟಿ ಉದ್ಯಮದ ಜತೆಗೆ ಎಲೆಕ್ಟ್ರಾನಿಕ್ ಹಾರ್ಡ್ ವೇರ್, ವೈಮಾಂತರಿಕ್ಷ ಹಾಗೂ ಇತರ ತಯಾರಿಕಾ ಉದ್ಯಮಗಳ ಬೆಳವಣಿಗೆಗೆ ಪೂರಕವಾಗುವಂತೆ ಬಳಸಿಕೊಳ್ಳಲಾಗುವುದು ಎಂದೂ ಅವರು ವಿವರಿಸಿದರು.

ದಾಖಲೆಗಳ ಪ್ರಕಾರ ಬೆಳಗಾವಿ ಗ್ರಾಮದ ಆರ್.ಎಸ್. ನಂಬರ್ 1304ರಿಂದ 1397ರವರೆಗಿನ ಭೂಮಿಯು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡಿದೆ. ಈ ಕಾರಣಕ್ಕಾಗಿಯೇ ಉದ್ದೇಶಿತ ಐ.ಟಿ.ಪಾರ್ಕ್ ಸ್ಥಾಪನೆಗೆ ಅನುಕೂಲಕರವಾಗಿದೆ. ಈ ಭೂಮಿಯನ್ನು ರಾಜ್ಯ ಸರ್ಕಾರ ಪುನರ್ ಸ್ವಾಧೀನಕ್ಕೆ ತೆಗೆದುಕೊಳ್ಳಲು 2012ರ ನವೆಂಬರ್‌ನಲ್ಲೇ ಆದೇಶ ಹೊರಡಿಸಿದೆ. ಆದರೆ ಇದು ರಕ್ಷಣಾ ಇಲಾಖೆ ಸ್ವಾಧೀನದಲ್ಲೇ ಮುಂದುವರಿದಿದೆ ಎಂದು ಅಶ್ವತ್ಥ ನಾರಾಯಣ್ ಮನವರಿಕೆ ಮಾಡಿಕೊಟ್ಟರು.

ರಾಜ್ಯದಲ್ಲಿ ಸಮತೋಲನದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೊಳಿಸಿದೆ. ಬೆಳಗಾವಿಯು ಉತ್ತಮ ಶೈಕ್ಷಣಿಕ ವಲಯವಾಗಿದ್ದು, ಸಮೀಪದಲ್ಲಿರುವ ಧಾರವಾಡದಲ್ಲಿ ಐಐಟಿ-ಧಾರವಾಡ, ಐಐಐಟಿ-ಧಾರವಾಡ, ಕೆ.ಎಲ್.ಇ.ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳು ಇವೆ. ಈ ಸಂಸ್ಥೆಗಳಿಂದ ಪ್ರತಿವರ್ಷ ಪ್ರತಿಭಾವಂತ ಪದವೀಧರರು ಹೊರಬರುತ್ತಿದ್ದಾರೆ. ಇಲ್ಲಿ ಐಟಿ/ಐಟಿಇಎಸ್ ಉದ್ಯಮಕ್ಕೆ ಸೂಕ್ತವಾದ ವಾತಾವರಣವಿದೆ. ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣದಿಂದ ಈ ಕ್ಷೇತ್ರದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇದೆ ಎಂದೂ ಅವರು ವಿವರಿಸಿದರು.

ಬೆಳಗಾವಿ ಶಾಸಕ ಅಭಯ ಪಾಟೀಲ ಈ ವೇಳೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.