ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರಣ್ಯ ಪ್ರದೇಶದಲ್ಲಿ ಅದಿರು ಸಾಗಣೆ ಕೋರಿಕೆ: ಅರ್ಜಿ ವಜಾ

Published 16 ಜನವರಿ 2024, 16:20 IST
Last Updated 16 ಜನವರಿ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ‘ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಮಾರ್ಗದ ಮೂಲಕ ಕಬ್ಬಿಣದ ಅದಿರು ಸಾಗಣೆಗೆ ಅನುಮತಿ ನೀಡಬೇಕು’ ಎಂದು ಕೋರಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಮೆಸರ್ಸ್ ಠಾಕೂರ್ ಇಂಡಸ್ಟ್ರೀಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.

‘ಅರಣ್ಯ ಪ್ರದೇಶದಲ್ಲಿ ತೆಗೆದ ಅದಿರು ಸಾಗಣೆಗೆ ಮಾತ್ರ ಅರಣ್ಯ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಇದು ಬೇರೆಡೆ ತೆಗೆದಿರುವ ಅದಿರು ಆಗಿರುವ ಕಾರಣ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿಲ್ಲ’ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ‘ಕರ್ನಾಟಕ ಅಕ್ರಮ ಗಣಿಗಾರಿಕೆ, ಸಾಗಣೆ, ದಾಸ್ತಾನು ನಿಯಮ–2011ರ ನಿಯಮ 3ರ ಪ್ರಕಾರ ಅನುಮತಿಯನ್ನು ಅಗತ್ಯವಾಗಿ ಪಡೆಯಲೇಬೇಕು’ ಎಂದು ಆದೇಶಿಸಿದೆ.

‘ಖನಿಜ ಸಾಗಣೆಯಿಂದ ಉಂಟಾಗುವ ಸಂಭವನೀಯ ಹಾನಿ ಅಥವಾ ನಷ್ಟವನ್ನು ತಪ್ಪಿಸುವುದು ಅರಣ್ಯ ಸಂರಕ್ಷಣೆಯ ಭಾಗವಾಗಿದೆ. ಹೀಗಾಗಿ, ಅರ್ಜಿದಾರರು ಅರಣ್ಯ ಅನುಮತಿ ಪಡೆಯಬೇಕು‘ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT