ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇರಾ ಮೇಲ್ಮನವಿ ನ್ಯಾಯಮಂಡಳಿ: 15 ದಿನಗಳಲ್ಲಿ ನೇಮಕ

Published 24 ಏಪ್ರಿಲ್ 2024, 16:12 IST
Last Updated 24 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ಕೆ–ರೇರಾ) ಮೇಲ್ಮನವಿ ನ್ಯಾಯಮಂಡಳಿಗೆ 15 ದಿನಗಳಲ್ಲಿ ಅಧ್ಯಕ್ಷರನ್ನು ನೇಮಿಸಲಾಗುವುದು ಎಂಬ ರಾಜ್ಯ ಸರ್ಕಾರದ ವಾಗ್ದಾನವನ್ನು ದಾಖಲೆಯಲ್ಲಿ ಸ್ವೀಕರಿಸಿದ ಹೈಕೋರ್ಟ್ ಈ ಕುರಿತಾದ ಅರ್ಜಿಗಳನ್ನು ವಿಲೇವಾರಿ ಮಾಡಿದೆ.

ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಮುಖ್ಯಸ್ಥರನ್ನು ನೇಮಿಸುವಂತೆ ಕೋರಿ ಮ್ಯಾಥ್ಯೂ ಥಾಮಸ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ‘ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರಿಗೆ ಅಧ್ಯಕ್ಷರ ಹೆಸರನ್ನು ಒಳಗೊಂಡ ಕಡತ ಕಳುಹಿಸಬೇಕಿದೆ. ನೇಮಕ ಮಾಡುವುದು ಮಾತ್ರ ಬಾಕಿ ಇದೆ‘ ಎಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT