ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನೀಡಿರುವ ಮೀಸಲಾತಿ ಪರಾಮರ್ಶೆ ನಡೆಸಲು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದೆ.

ಕಳೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಸಮಿತಿ ರಚನೆ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಗಿತ್ತು. ಬುಧವಾರ ಈ ಸಂಬಂಧ ಆದೇಶ ಹೊರಡಿಸಲಾಗಿದೆ.

ಸಮಿತಿಯ ಉಳಿದ ಸದಸ್ಯರು– ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ.

ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಹುದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ 15 ರಿಂದ 17 ಕ್ಕೂ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ ಶೇ 7 ಕ್ಕೆ ಹೆಚ್ಚಿಸಲು ಬೇಡಿಕೆ ಮುಂದಿಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.