ಬೆಂಗಳೂರು: ‘ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಯಾವ ರೀತಿಯಲ್ಲಿ ಶೇ 1 ರಷ್ಟು ಒಳಮೀಸಲಾತಿ  ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಮನವಿಯನ್ನು ಶುಕ್ರವಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ಸಿಎಸ್ ಟಿಎಸ್ಪಿ ಕಾರ್ಯಕ್ರಮ ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಂದಕ್ಕೂ ಪರಿಹಾರ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದು ಜಾತಿ ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ನಿಮ್ಮ ಸಮಸ್ಯೆಗೂ ಪರಿಹಾರ ಹುಡುಕಿ, ನ್ಯಾಯ ಒದಗಿಸುತ್ತೇವೆ’ ಎಂದು ಹೇಳಿದರು.

‘ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೆ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ: ಎಂದೂ ಸಿದ್ದರಾಮಯ್ಯ ತಿಳಿಸಿದರು.

ಅಲೆಮಾಗಳ ಬೇಡಿಕೆ: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಎ ಕೆಟಗರಿಯಲ್ಲಿ ಪ್ರತ್ಯೇಕ ಶೇ 1 ರಷ್ಟು ಮೀಸಲಾತಿ ನೀಡಬೇಕು. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ರಚನೆ ಹಾಗೂ ಅಲೆಮಾರಿ ಸಮುದಾಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಶೇಷಪ್ಪ ಮತ್ತು ಸಾಮಾಜಿಕ ಹೋರಾಟಗಾರ ನೂರ್ ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನೀವು ಇಟ್ಟಿರುವ ಹಕ್ಕೊತ್ತಾಯಗಳಿಗೆ ನಮ್ಮ ತಾತ್ವಿಕ ಒಪ್ಪಿಗೆ ಇದೆ. ನೀವು ಹೇಳಿದಂತೆ ಪ್ರತ್ಯೇಕ ನಿಗಮ, ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬಹುದು. ಅದು ನಮ್ಮ ಕರ್ತವ್ಯವೂ ಆಗಿದೆ. ಈಗ ಆಗಿರುವ ಒಳ ಮೀಸಲಾತಿ ವರ್ಗೀಕರಣ ಸಂತಸದಿಂದ ಮಾಡಿದ್ದಲ್ಲ. ಈ ಸಮಸ್ಯೆ ಬಗೆಹರಿಸಲು ಒಂದು ಇಕ್ಕಟ್ಟಿನ ಸಂದರ್ಭದಲ್ಲಿ ನಾವು ಮಾಡಿದ ತಾತ್ಕಾಲಿಕ ತೀರ್ಮಾನ. ಅದನ್ನು ಶಾಶ್ವತ ಆಯೋಗ ಮುಂದೆ ಇಟ್ಟು ಚರ್ಚಿಸಿ ಸೂಕ್ತವಾದ ಬದಲಾವಣೆ ಮಾಡಬೇಕು ಎನ್ನುವುದು ಸರ್ಕಾರದ ನಿಲುವು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ನಿಯೋಗಕ್ಕೆ ತಿಳಿಸಿದ್ದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಈ ವಿಚಾರವಾಗಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಮುಖ್ಯಮಂತ್ರಿ ಮನವಿ ಮಾಡಿದರು. ‘ಇದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ. ಆದರೆ ಅಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಉದ್ಯೋಗ ಭರ್ತಿ ಮಾಡಬಾರದು ಎಂದು ಅವರಿಗೆ ಮನವಿ ಮಾಡಿದ್ದಾಗಿ’ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.