ಬೆಂಗಳೂರು: ‘ಸರ್ಕಾರಿ ಆಸ್ಪತ್ರೆಗಳಲ್ಲಿ ವಿತರಿಸುವ ಉಚಿತ ಔಷಧಗಳ ನಿರಾಕರಿಸುವುದನ್ನು ತಡೆಯುವ ಸಲುವಾಗಿ, 184 ಜನೌಷಧ ಕೇಂದ್ರಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದಲ್ಲಿ 1,417 ಜನೌಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲಾ ಜನೌಷಧ ಕೇಂದ್ರಗಳನ್ನು ಮುಚ್ಚಿಸಿಲ್ಲ. ಬದಲಾಗಿ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳ ಕಾರ್ಯನಿರ್ವಹಣೆಗೆ ಮಾತ್ರ ನಿರ್ಬಂಧ ವಿಧಿಸಲು ತೀರ್ಮಾನಿಸಲಾಗಿದೆ. ದೇಶದಲ್ಲಿ ಅಧಿಕ ಜನೌಷಧ ಕೇಂದ್ರಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ’ ಎಂದು ಹೇಳಿದ್ದಾರೆ.

‘ಔಷಧಗಳನ್ನು ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆಯುವ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ’ ಎಂದಿದ್ದಾರೆ.

‘ಸರ್ಕಾರಿ ಆಸ್ಪತ್ರೆಗಳ ಆವರಣಗಳ ಹೊರಗಿರುವ ಜನೌಷಧ ಕೇಂದ್ರಗಳನ್ನು ನಿರ್ಬಂಧಿಸುತ್ತಿಲ್ಲ. ಜನರು ತಮ್ಮ ಆಯ್ಕೆಯಂತೆ ಈ ಕೇಂದ್ರಗಳಿಗೆ ಭೇಟಿ ನೀಡಿ, ಔಷಧ ಪಡೆಯಲು ಸ್ವತಂತ್ರರಾಗಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಎಲ್ಲ ಅಗತ್ಯ ಔಷಧಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನಿಯಮಿತವಾಗಿ ಪೂರೈಸಲಾಗುತ್ತಿದೆ. ಆಸ್ಪತ್ರೆಗಳಿಗೆ ಅಗತ್ಯ ಅನುದಾನವನ್ನೂ ಒದಗಿಸಲಾಗಿದ್ದು, ಯಾವುದೇ ಔಷಧಗಳ ಕೊರತೆ ಉಂಟಾದಲ್ಲಿ ಸ್ಥಳೀಯವಾಗಿ ಔಷಧಗಳನ್ನು ಖರೀದಿಸಲು ಸೂಚನೆ ನೀಡಲಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.