ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ನಟ ಹಾಗೂ ಬಿಜೆಪಿ ಮುಖಂಡ ಕೆ. ಶಿವರಾಂ ಅವರು ಹೃದಯಾಘಾತದಿಂದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಕುಟುಂಬದವರು ಪ್ರಜಾವಾಣಿಗೆ ಖಚಿತಪಡಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸು.

ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದ ಶಿವರಾಂ ಅವರು ’ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ.

ರಾಮನಗರ ಮೂಲದ ಅವರು ಚಲವಾದಿ ಮಹಾಸಭಾದ ಮುಖಂಡರೂ ಹೌದು. ಕಳೆದ ಏಳು ವರ್ಷಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ.
.ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.