ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಛತ್ತೀಸ್ ಗಡ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯಾಗಿದ್ದ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರು, ಕರ್ನಾಟಕ ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಮತ್ತು "ನಾಡೋಜ" ಗೌರವಕ್ಕೆ ಭಾಜನರಾಗಿದ್ದ ನ್ಯಾಯಮೂರ್ತಿ ಎಸ್.ಆರ್.ನಾಯಕ್ (80) ಭಾನುವಾರ ಮಧ್ಯಾಹ್ನ 2.18ಕ್ಕೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ ಡಾ.ಎನ್.ಎಸ್.ರಾಹುಲ್, ಪುತ್ರಿ ನಿಶಾ ಗಾಂವ್ಕರ್ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

"ಅಂತ್ಯಕ್ರಿಯೆ ಸೋಮವಾರ (ಮೇ 19) ಸಂಜೆ 4 ಗಂಟೆಗೆ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ. ಆರ್.ಎಂ.ವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ" ಎಂದು ಪುತ್ರ ಡಾ.ರಾಹುಲ್ "ಪ್ರಜಾವಾಣಿ"ಗೆ ತಿಳಿಸಿದ್ದಾರೆ.

ಪರಿಚಯ: ಕುಮಟಾ ತಾಲ್ಲೂಕಿನ ನಾಡಮ್ಯಾಸಕೇರಿ ಗ್ರಾಮದಲ್ಲಿ ಕೃಷಿಕ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ 1945ರ ಜನವರಿ 1 ರಂದು ಎಸ್.ಆರ್.ನಾಯಕ್ ಜನಿಸಿದರು.

ಮೈಸೂರು ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಕಾನೂನು ಮತ್ತು ಕಾನೂನು ವಿಭಾಗದಲ್ಲಿಯೇ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದ ನಾಯಕ್ ಅವರು ತಮ್ಮ ಶೈಕ್ಷಣಿಕ ಜೀವನದಲ್ಲಿ ರ್ಯಾಂಕ್ ವಿದ್ಯಾರ್ಥಿಯಾಗಿದ್ದರು. 1974ರಲ್ಲಿ ವಕೀಲರಾಗಿ ರಾಜ್ಯ ವಕೀಲರ ಪರಿಷತ್ ನಲ್ಲಿ ಸನ್ನದು ನೋಂದಣಿ ಮಾಡಿಸಿದ ಅವರು ಮೊದಲಿಗೆ ಎಂ.ಗೋಪಾಲಕೃಷ್ಣ ಶೆಟ್ಟಿ ನಂತರ ಎಲ್.ಜಿ.ಹಾವನೂರು ಅವರ ಬಳಿ ಕಿರಿಯ ವಕೀಲರಾಗಿ ವೃತ್ತಿ ಪ್ರಾವೀಣ್ಯ ಸಾಧಿಸಿದರು. ಕೆಲವು ಕಾಲ ಬೆಂಗಳೂರಿನ ಬಿಎಂಎಸ್ ಮತ್ತು ಎಸ್ ಎಲ್ ಎಸ್ ಆರ್ ಸಿ ಹಾವನೂರು ಕಾನೂನು ಕಾಲೇಜುಗಳಲ್ಲಿ ಅರೆಕಾಲಿಕ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಯಾಗಿ 1994ರ ಫೆಬ್ರುವರಿ 25ರಂದು ನೇಮಕಗೊಂಡ ಅವರು ನಂತರ ಆಂಧ್ರಪ್ರದೇಶ ಹೈಕೋರ್ಟ್ ಗೆ ವರ್ಗಾವಣೆಗೊಂಡಿದ್ದರು. ಆಂಧ್ರಪ್ರದೇಶ ನ್ಯಾಯಾಂಗ ಅಕಾಡೆಮಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ನಂತರ ಛತ್ತೀಸ್ ಗಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಯಾಗಿ ನಿವೃತ್ತರಾಗಿದ್ದರು.

"ಎಲ್ಲ ವರ್ಗದ ಬಡವರ, ದಲಿತ, ಹಿಂದುಳಿದ ಮತ್ತು ದಮನಿತರ ದನಿಯಾಗಿ ಖ್ಯಾತಿ ಹೊಂದಿದ್ದ ನಾಯಕ್ ಅವರು ಸಿಟಿ ಸಿವಿಲ್ ಕೋರ್ಟ್ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದರು" ಎಂದು ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಸ್ಮರಿಸಿದ್ದಾರೆ.

ಕುಟುಂಬದವರ ಸಂಪರ್ಕ ಸಂಖ್ಯೆ: 99028-41803 (ಡಾ.ರಾಹುಲ್)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.