ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆರಿಗೆ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ: ಸಿದ್ದರಾಮಯ್ಯ

Published 9 ಫೆಬ್ರುವರಿ 2024, 15:40 IST
Last Updated 9 ಫೆಬ್ರುವರಿ 2024, 15:40 IST
ಅಕ್ಷರ ಗಾತ್ರ

ಹರಿಹರ: ‘ತೆರಿಗೆ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜಕೀಯ ಬಿಟ್ಟುಬಿಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾತ್ರಾ ಮಹೋತ್ಸವದಲ್ಲಿ ಅವರು ಮಾತನಾಡಿದರು.


‘ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಪ್ರಶ್ನಿಸುವುದು ತಪ್ಪೇ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದರು.

‘ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ತೆರಿಗೆ ವಿಚಾರವಾಗಿ ಅಮಿತ್ ಶಾ ಜೊತೆ ಮಾತನಾಡಲಿ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT