ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ 42ನೇ ಎಸಿಎಂಎಂ ವಿಶೇಷ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ಮನೆಗೆಲಸದ ಸಂತ್ರಸ್ತೆ ದಾಖಲಿಸಿರುವ ಈ ಪ್ರಕರಣ ಶುಕ್ರವಾರಕ್ಕೆ (ಮೇ 16) ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರ ಮುಂದೆ ವಿಚಾರಣೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ರೇವಣ್ಣ ಮುಂಚಿತವಾಗಿಯೇ ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಕೋರಿದ್ದರು.

ಏತನ್ಮಧ್ಯೆ, ಪ್ರಾಸಿಕ್ಯೂಷನ್ ಪರ ವಕೀಲರು ಹಾಜರಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದರು. ಜಾಮೀನು ನೀಡದಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಕೆಲಕಾಲ ವಾದ ಆಲಿಸಿದ ನ್ಯಾಯಾಧೀಶರು, ‘₹ 5 ಲಕ್ಷ ಮೊತ್ತದ ಬಾಂಡ್ ನೀಡಬೇಕು ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು’ ಎಂಬ ಷರತ್ತಿನೊಂದಿಗೆ ಮಧ್ಯಂತರ ಜಾಮೀನು ನೀಡಿ ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ (ಮೇ 17) ಮುಂದೂಡಿದರು.

ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಮೊದಲನೇ ಆರೋಪಿಯಾಗಿದ್ದು, ಸಂಸದರೂ ಆದ ಪುತ್ರ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಐಪಿಸಿ ಕಲಂ 376 ಸೇರ್ಪಡೆ ಮಾಡಬೇಕೆಂಬ ಎಸ್ಐಟಿ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.