ಬೆಂಗಳೂರು: ರಾಜ್ಯದ ವಿವಿಧ ಹೋಬಳಿಗಳಲ್ಲಿ 150 ನಾಡ ಕಚೇರಿಗಳಿಗೆ ಸುಸಜ್ಜಿತ ಹೊಸ ಕಟ್ಟಡ ನಿರ್ಮಿಸಲು ಕಂದಾಯ ಇಲಾಖೆ ಸಮ್ಮತಿಸಿದೆ.

ಈ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.

‘ರಾಜ್ಯದಲ್ಲಿ 771 ನಾಡ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು 54 ಸೇವೆಗಳನ್ನು ಪಡೆಯಲು ಪ್ರತಿನಿತ್ಯ ಭೇಟಿ ನೀಡುತ್ತಾರೆ. ಹಲವು ಪ್ರಮಾಣ ಪತ್ರಗಳು, ದಾಖಲೆಗಳು, ಕಂದಾಯ ಸೇವೆಗಳಿಗಾಗಿ ಬಳಕೆಯಾಗುತ್ತಿವೆ. ಜನ ಸಂಪರ್ಕವಿರುವ ಹಲವು ನಾಡ ಕಚೇರಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಕೆಲವೆಡೆ ಅಧಿಕಾರಿಗಳು ಹಳೇ ಕಟ್ಟಡಗಳಲ್ಲಿ ಅಥವಾ ಶಿಥಿಲಾವಸ್ಥೆಯ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಮೊದಲ ಹಂತದಲ್ಲಿ 94 ಕಚೇರಿಗಳಿಗೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ 56 ಕಚೇರಿಗಳ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ’ ಎಂದಿದ್ದಾರೆ.

‘ಹೊಸ ಕಟ್ಟಡಗಳಲ್ಲೇ ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗಳೂ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಹಾಗೂ ಸಿಬ್ಬಂದಿಗೆ ಸುಸಜ್ಜಿತ ಕಚೇರಿ ಒದಗಿಸುವುದು ಸರ್ಕಾರದ ಗುರಿ. ಕಟ್ಟಡ ನಿರ್ಮಾಣಕ್ಕೆ ಇದುವರೆಗೆ ₹18 ಲಕ್ಷದಂತೆ ಹಂಚಿಕೆ ಮಾಡಲಾಗುತ್ತಿತ್ತು. ಇಷ್ಟು ಕಡಿಮೆ ಮೊತ್ತದಲ್ಲಿ ಅಗತ್ಯ ಸೌಕರ್ಯ ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ, ನಾಡ ಕಚೇರಿಗಳ ನಿರ್ಮಾಣಕ್ಕೆ ನಗರ ಪ್ರದೇಶಕ್ಕೆ ₹75 ಲಕ್ಷ ಹಾಗೂ ಗ್ರಾಮೀಣ ಪ್ರದೇಶಕ್ಕೆ ₹55 ಲಕ್ಷ ನೀಡಲು ತೀರ್ಮಾನಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.