ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮೊದಲ ಸಂಪುಟ ಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರದಂತೆ ಸಂಧ್ಯಾ ಸುರಕ್ಷಾ ಪಿಂಚಣಿ, ಅಂಗವಿಕಲರು ಮತ್ತು ವಿಧವೆಯರ ಮಾಸಾಶನಗಳನ್ನು ಹೆಚ್ಚಿಸಿ ಕಂದಾಯ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಜುಲೈ 28ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ಸಭೆ ನಡೆಸಿದ್ದ ಬೊಮ್ಮಾಯಿ, ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ₹ 1,000ದಿಂದ ₹ 1,200ಕ್ಕೆ, ಅಂಗವಿಕಲರು ಮತ್ತು ವಿಧವೆಯರ ಮಾಸಾಶನವನ್ನು ₹ 600ರಿಂದ ₹ 800ಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದರು. ಮಾಸಾಶನ ಪರಿಷ್ಕರಿಸಿರುವ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆಗಸ್ಟ್ ತಿಂಗಳಿನಿಂದಲೇ ಪರಿಷ್ಕೃತ ಮಾಸಾಶನ ಫಲಾನುಭವಿಗಳಿಗೆ ಸಿಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.