ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ನಿಗಮ ಮಂಡಳಿಗಳ ಪರಿಷ್ಕೃತ ಅಂಕ ಪ್ರಕಟ

Published 22 ಮಾರ್ಚ್ 2024, 17:14 IST
Last Updated 22 ಮಾರ್ಚ್ 2024, 17:14 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೋನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ಮಾರ್ಚ್ 7ರಂದು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿ, ವಿಷಯವಾರು ಅಂಕಗಳು ಕಾಣದಿದ್ದಲ್ಲಿ ಸಂಬಂಧಪಟ್ಟ ಲಿಂಕ್ ಮೂಲಕ ಪೂರ್ಣ ಮಾಹಿತಿಯನ್ನು ಅಪ್ಲೋಡ್‌ ಮಾಡಲು ಅಭ್ಯರ್ಥಿಗಳಿಗೆ ಸೂಚಿಸಲಾಗಿತ್ತು.  ಬಹಳಷ್ಟು ಅಭ್ಯರ್ಥಿಗಳು ಯಾವುದೇ ಮಾಹಿತಿಯನ್ನು ಅಪ್ಲೋಡ್‌ ಮಾಡಿರಲಿಲ್ಲ. ಹಾಗಾಗಿ, ಮತ್ತೊಮ್ಮೆ ಪರಿಷ್ಕೃತ ಅಂಕ ಪಟ್ಟಿ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್‌ 29ರವರೆಗೆ ಅವಕಾಶ ನೀಡಲಾಗಿದೆ. 

ಆಕ್ಷೇಪಣೆಗಳನ್ನು ನಿಗದಿತ ಲಿಂಕ್ ಮೂಲಕವೇ ಸಲ್ಲಿಸಲು ಸೂಚಿಸಲಾಗಿದೆ. ಇ-ಮೇಲ್, ಅಂಚೆ ಅಥವಾ ಖುದ್ದಾಗಿ ಬಂದು ನೀಡುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT