ಬೆಂಗಳೂರು: ಜೆಡಿಎಸ್ ಮುಖಂಡ ರೇವೂ ನಾಯ್ಕ್ ಬೆಳಮಗಿ ಕಾಂಗ್ರೆಸ್ ಸೇರಲು ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿಮಾಡಿ ಚರ್ಚೆ ನಡೆಸಿದ್ದಾರೆ.

ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಬೆಳಮಗಿ ಅವರು ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲಬುರ್ಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಳಿಕ ಜೆಡಿಎಸ್ ಸೇರಿದ್ದ ಅವರು, ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋತರೂ, ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಕ್ರಿಯರಾಗಿದ್ದರು.

ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕ ರೇವೂ ನಾಯ್ಕ್ ಅವರು ಜೆಡಿಎಸ್‌ನಲ್ಲೂ ಸಕ್ರಿಯರಾಗಿರಲಿಲ್ಲ. ಕಲಬುರ್ಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವ ಮಹತ್ವಾಕಾಂಕ್ಷೆಯಿಂದ ಪಕ್ಷಾಂತರಕ್ಕೆ ಸಿದ್ಧತೆ ನಡೆಸಿದ್ದಾರೆ. ಅದಕ್ಕೆ ಪೂರಕವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಮಾಡಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.