ಬೆಂಗಳೂರು: ‘ವಲಯ ಅರಣ್ಯಾಧಿಕಾರಿಗಳ ವರ್ಗಾವಣೆಗೂ ಕೌನ್ಸೆಲಿಂಗ್ ನಿರ್ವಹಣಾ ವ್ಯವಸ್ಥೆ ಜಾರಿ ಮಾಡುವಂತೆ ಅರಣ್ಯ ಸಚಿವರಿಗೆ ಸಲ್ಲಿರುವ ಮನವಿಪತ್ರದಲ್ಲಿ ‘ಭ್ರಷ್ಟಾಚಾರ’ ಪದವನ್ನು ಬಳಕೆ ಮಾಡಿಲ್ಲ’ ಎಂದು ಕರ್ನಾಟಕ ರಾಜ್ಯ ವಲಯ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ ರೆಡ್ಡಿ ತಿಳಿಸಿದ್ದಾರೆ.

‘ವಲಯ ಅರಣ್ಯ ಅಧಿಕಾರಿಗಳಿಗೆ ಅನುಕೂಲ ಆಗುತ್ತದೆ ಎಂಬ ಕಾರಣಕ್ಕೆ ನಮ್ಮ ಸಂಘವು ಸೆ.10ರಂದು ಸಚಿವರಿಗೆ ಮನವಿ ಸಲ್ಲಿಸಿತ್ತು. ವರ್ಗಾವಣೆಯಲ್ಲಿ ರಾಜಕೀಯ ಒತ್ತಡ, ವೈಯಕ್ತಿಕ ಶಿಫಾರಸು, ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿವೆ ಎಂಬ ದಟ್ಟ ಭಾವನೆ ಅಧಿಕಾರಿಗಳು ಮತ್ತು ಸಾರ್ವಜನಿಕರಲ್ಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂಬಂತೆ ಸುದ್ದಿ ಪ್ರಕಟವಾಗಿದೆ. ನಮ್ಮ ವರದಿಯಲ್ಲಿ ಈ ರೀತಿಯ ಮಾತುಗಳು ಇರಲಿಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಅರಣ್ಯ ಇಲಾಖೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ, ಗಸ್ತು ವನಪಾಲಕ ಹುದ್ದೆಗಳಿಗೆ 2 ವರ್ಷಗಳಿಂದ ಆನ್ಲೈನ್ ಮೂಲಕ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಜಾರಿ ಮಾಡಲಾಗಿದೆ. ಇದರಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಾಗಿದೆ. ಅದೇ ವರ್ಗಾವಣೆ ಪ್ರಕ್ರಿಯೆಯನ್ನು ವಲಯ ಅರಣ್ಯ ಅಧಿಕಾರಿಗಳಿಗೂ ವಿಸ್ತರಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆ’ ಎಂದು ರೆಡ್ಡಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.