ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿ.ಎಸ್‌ಸಿ ನರ್ಸಿಂಗ್‌: ಎರಡು ಕಾಲೇಜುಗಳ ಪ್ರವೇಶಕ್ಕೆ ನಿರ್ಬಂಧ

Published : 11 ಸೆಪ್ಟೆಂಬರ್ 2024, 16:16 IST
Last Updated : 11 ಸೆಪ್ಟೆಂಬರ್ 2024, 16:16 IST
ಫಾಲೋ ಮಾಡಿ
Comments

ಬೆಂಗಳೂರು: ಬಿ.ಎಸ್‌ಸಿ ನರ್ಸಿಂಗ್‌ ಕೋರ್ಸ್‌ಗಳಿಗೆ 2024–25ನೇ ಸಾಲಿಗೆ ಪ್ರವೇಶ ನೀಡದಂತೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರದ ಎರಡು ನರ್ಸಿಂಗ್‌ ಕಾಲೇಜುಗಳಿಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿರ್ಬಂಧ ವಿಧಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಹಂಚಿಕೆ ಮಾಡಲಾಗಿದ್ದ ಸೀಟುಗಳಿಗೆ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಅಧಿಕ ಶುಲ್ಕ ಪಡೆಯುತ್ತಿರುವ ಆರೋಪದ ಮೇಲೆ ಮಂಡ್ಯದ ನ್ಯೂ ನವೋದಯ ನರ್ಸಿಂಗ್‌ ಕಾಲೇಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲ್ಲೂಕಿನ  ಅತ್ತಿಬೆಲೆಯ ಆಕ್ಸ್‌ಫರ್ಡ್‌ ನರ್ಸಿಂಗ್‌ ಕಾಲೇಜುಗಳಿಗೆ ನಿರ್ಬಂಧ ಹೇರಲಾಗಿದೆ.

ಎರಡೂ ಕಾಲೇಜುಗಳು ನಿಗದಿಗಿಂತ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವರು ದೂರು ನೀಡಿದ್ದರು. ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು. ಕೆಇಎ ಸೀಟು ಹಂಚಿಕೆ ಪಟ್ಟಿಯಿಂದಲೂ ಕಾಲೇಜುಗಳ ಹೆಸರನ್ನು ಕೈಬಿಡಲಾಗಿದೆ. 

ರಾಜ್ಯದ ಎಲ್ಲ ನರ್ಸಿಂಗ್‌ ಕಾಲೇಜುಗಳ ಶುಲ್ಕವನ್ನು ನಿಯಂತ್ರಿಸಲು ಸಮಿತಿ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT