ಬೆಂಗಳೂರು: ‘ರಾಜ್ಯದಲ್ಲಿ ಕಳೆದೊಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9,943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲಾ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಅವರು, ‘ಕಂದಾಯ, ಪೊಲೀಸ್, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ’ ಎಂದರು.

‘ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್ಸ್ಟಾಟ್ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ, ಟ್ರಾಮಾ ಸೆಂಟರ್ ನೆಟ್ವರ್ಕ್ ಮಾಡಬೇಕು’ ಎಂದು ಸಲಹೆ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.