ಬೆಂಗಳೂರು: ಬೆಂಗಳೂರಿನ ತಾತಗುಣಿಯಲ್ಲಿರುವ ದೇವಿಕಾರಾಣಿ ರೋರಿಕ್ ಎಸ್ಟೇಟ್ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬಾರದು ಎಂದು ಪರಿಸರ ಕಾರ್ಯಕರ್ತರೊಬ್ಬರು ಸಲ್ಲಿಸಿರುವ ಮನವಿಯ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ರಾಜ್ಯ ಅರಣ್ಯ ಇಲಾಖೆಗೆ ಸೂಚಿಸಿದೆ.

ಕೇಂದ್ರದ ಅರಣ್ಯ ಸಂರಕ್ಷಣಾ ಕಾಯ್ದೆ 1980ರಡಿ ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ಇಂತಹ ಯೋಜನೆ ಕೈಗೆತ್ತಿಕೊಳ್ಳುವಂತಿಲ್ಲ. ಆದ್ದರಿಂದ ಈ ಯೋಜನೆ ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು ಎಂದು ಪರಿಸರ ಕಾರ್ಯಕರ್ತ ಗಿರಿಧರ ಕುಲಕರ್ಣಿ ಪತ್ರ ಬರೆದಿದ್ದರು.

‘ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು, ಅದರ ಮಾಹಿತಿಯನ್ನು ಮನವಿದಾರರು ಮತ್ತು ನಮ್ಮ ಕಚೇರಿಗೂ ಕಳಿಸಬೇಕು’ ಎಂದು ಕೇಂದ್ರ ಅರಣ್ಯ ಇಲಾಖೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.