ಬೆಂಗಳೂರು: ‘ನಾನು ಯಾವತ್ತೂ ಬಾಡಿಗೆ ಟ್ರೋಲರ್‌ಗಳನ್ನು ಬಳಸಿಕೊಂಡಿಲ್ಲ. ಈ ವಿಷಯದಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

‘ರೋಹಿಣಿ ಸಿಂಧೂರಿ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಲು ಬಾಡಿಗೆ ಟ್ರೋಲರ್‌ಗಳನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದ ಡಿ. ರೂಪಾ, ಈ ಸಂಬಂಧ ಸಾರ್ವಜನಿಕ ಸಂಪರ್ಕ ಕ್ಷೇತ್ರದ ಸಂಸ್ಥೆಯೊಂದರ ಮಾಜಿ ಉದ್ಯೋಗಿಯೊಬ್ಬರ ಜತೆ ವಾಟ್ಸ್ ಆ್ಯಪ್‌ನಲ್ಲಿ ನಡೆದ ಸಂಭಾಷಣೆಯನ್ನು ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗಪಡಿಸಿದ್ದರು. ರೂಪಾ ಅವರ ಫೇಸ್‌ಬುಕ್ ಪೋಸ್ಟ್ ಕುರಿತು ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಗೆ ಸ್ಪಷ್ಟನೆ ನೀಡಿರುವ ರೋಹಿಣಿ, ‘ಬಾಡಿಗೆ ಟ್ರೋಲರ್‌ಗಳ ಆರೋಪ ಆಧಾರರಹಿತವಾದುದು. ದುರುದ್ದೇಶದಿಂದ ಈ ಆರೋಪ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಬಾಡಿಗೆ ಟ್ರೋಲರ್ ಬಳಸಿದ ರೋಹಿಣಿ: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.