ರಾಜರಾಜೇಶ್ವರಿ ನಗರ: ಸಕಲ ಸೌಲಭ್ಯವುಳ್ಳ ಹವಾನಿಯಂತ್ರಿತ ಹೈಟೆಕ್ ಮಾದರಿಯಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸೂಲಿಕೆರೆ ಗ್ರಾಮ ಪಂಚಾಯಿತಿ ಕಟ್ಟಡವನ್ನು ಬಿಡಿಎ ಅಧ್ಯಕ್ಷ, ಶಾಸಕ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.

‘ಸೂಲಿಕೆರೆ ಪಂಚಾಯಿತಿ ಕೆಂಪೇಗೌಡ ಬಡಾವಣೆ ವ್ಯಾಪ್ತಿಗೆ ಬರಲಿದೆ. ಸುತ್ತಮುತ್ತಲಿನ 14 ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು, ಒಳಚರಂಡಿ, ಉದ್ಯಾನ ನಿರ್ಮಿಸಲಾಗುವುದು. 4,025 ಮನೆಗಳಿಗೆ ಶೀಘ್ರ ಹಕ್ಕುಪತ್ರ ನೀಡಲಾಗುವುದು. ಈ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಸರ್ಕಾರ ಅಭಿವೃದ್ಧಿ ಕೆಲಸಕ್ಕೆ ₹ 6 ಕೋಟಿ ಬಿಡುಗಡೆ ಮಾಡಿದೆ. ಬಿಡಿಎ ವತಿಯಿಂದಲೂ ಹಲವು ಕಾಮಗಾರಿ ಕೈಗೊಳ್ಳಲಾಗುತ್ತಿದೆ’ ಎಂದರು.

‘ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ, ಸಿಮೆಂಟ್ ರಸ್ತೆ ಕಾಮಗಾರಿಗೆ ₹ 23 ಕೋಟಿ ಬಿಡುಗಡೆಯಾಗಿದೆ. ಇನ್ನೂ ಹಲವು ಅಭಿವೃದ್ಧಿ ಕೆಲಸ ಕೈಗೊಳ್ಳಲು ₹ 48 ಕೋಟಿ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದು, ಎರಡೇ ತಿಂಗಳಲ್ಲಿ ಅನುಮೋದನೆ ಸಿಗಲಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ವಿ.ಮಾರೇಗೌಡ ಅಧ್ಯಕ್ಷತೆ ವಹಿಸಿ, ‘ಸರ್ಕಾರ ಮತ್ತು ದಾನಿಗಳ ಸಹಕಾರದೊಂದಿಗೆ 50 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ’ ಎಂದು ಹೇಳಿದರು.

ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸದಸ್ಯೆ ಶೋಭಾ ತಿಮ್ಮೇಗೌಡ ಮತ್ತಿತರರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.