ಬೆಂಗಳೂರು: ಇದೇ 3ರಂದು ಉಪ ಚುನಾವಣೆ ನಡೆದ ಆರ್.ಆರ್. ನಗರ, ಶಿರಾ ಕ್ಷೇತ್ರ ಹಾಗೂ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆಅ. 28ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ನಡೆಯಲಿದೆ. ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ.

ಆರ್.ಆರ್. ನಗರ ಕ್ಷೇತ್ರದ ಮತ ಎಣಿಕೆ ಅದೇ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಲಗೇವಡೇರ ಹಳ್ಳಿಯಲ್ಲಿರುವ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ನಡೆಯಲಿದೆ. ಶಿರಾ ಕ್ಷೇತ್ರದ ಮತ ಎಣಿಕೆ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ.

ಮತ ಎಣಿಕೆಗೂ ಮೊದಲು ಬೆಳಿಗ್ಗೆ 7.30ಕ್ಕೆ ಚುನಾವಣಾ ವೀಕ್ಷಕರು ಮತ್ತು ಅಭ್ಯರ್ಥಿಗಳು ಅಥವಾ ಅವರ ಏಜೆಂಟರ ಸಮ್ಮುಖದಲ್ಲಿ ಮತ ಯಂತ್ರಗಳನ್ನು ಇರಿಸಿದ ಭದ್ರತಾ ಕೊಠಡಿ ತೆರೆಯಲಾಗುತ್ತದೆ. ಮೊದಲು ಅಂಚೆ ಮತಗಳು, 8.30ರಿಂದ ಮತಯಂತ್ರಗಳ (ಇವಿಎಂ) ಮತಗಳ ಎಣಿಕೆ ನಡೆಯಲಿದೆ.

ಶಿರಾದಲ್ಲಿ ಎರಡು ಕೊಠಡಿಗಳಲ್ಲಿ ಒಟ್ಟು 14 ಟೇಬಲ್ಗಳಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಆರ್.ಆರ್. ನಗರದಲ್ಲಿ ನಾಲ್ಕು ಕೊಠಡಿಗಳಲ್ಲಿ ಏಳು ಟೇಬಲ್ಗಳಂತೆ ಸೇರಿ ಒಟ್ಟು 28 ಟೇಬಲ್ಗಳು ಇರಲಿವೆ. ಎರಡೂ ಕಡೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದೂ ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಪರಿಷತ್ ಚುನಾವಣೆ– ಮತಎಣಿಕೆ: ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆದರೆ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಜ್ಞಾನ ವಿಭಾಗದಲ್ಲಿ ನಡೆಯಲಿದೆ.

ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.