ಕಲ್ಯಾಣ ಕರ್ನಾಟಕದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ 3,321 ಹುದ್ದೆಗಳ ಭರ್ತಿಗೆ ಅನುಮತಿ ದೊರೆತಿದೆ. ಉನ್ನತ ಶಿಕ್ಷಣ ಇಲಾಖೆಯ ಹಲವು ವಿಚಾರಗಳ ಕುರಿತು ಚರ್ಚಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ 16,455 ಬೋಧಕ ಹುದ್ದೆಗಳಲ್ಲಿ 699 ಖಾಲಿ ಇವೆ. ಬೋಧಕೇತರ 19,682 ಹುದ್ದೆಗಳಲ್ಲಿ 13,558 ಖಾಲಿ ಇವೆ. ಲ್ಯಾಬ್ ತಂತ್ರಜ್ಞರು ಮತ್ತಿತರ ಹುದ್ದೆಗಳ ಭರ್ತಿಗೆ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಹಂತಹಂತವಾಗಿ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದರು.