ಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ ಅಂಜಿಗ, ಬಾರ್ಕಿ ಪದಗಳನ್ನು ಒಳಗೊಂಡ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಬಿಜೆಪಿಯ ತಳವಾರ್ ಸಾಬಣ್ಣ ಸಭಾಪತಿ ಪೀಠದ ಮುಂದೆ ಏಕಾಂಗಿಯಾಗಿ ಧರಣಿ ನಡೆಸಿದರು.

ವಿಧಾನಪರಿಷತ್ ಕಲಾಪದಲ್ಲಿ ಅವರ ಗಮನ ಸೆಳೆಯುವ ಸೂಚನೆ ಕುರಿತು ಮಾತನಾಡುವಾಗ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ನಿಮ್ಮ ಪ್ರಶ್ನೆಗೆ ಸರ್ಕಾರ ಲಿಖಿತ ಉತ್ತರ ನೀಡಿದೆ. ಹೆಚ್ಚಿನ ಚರ್ಚೆಗೆ ಉತ್ತರ ನೀಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಹಾಜರಿಲ್ಲ. ಹಾಗಾಗಿ, ಚರ್ಚೆ ಮುಂದುವರಿಸುವುದು ಬೇಡ’ ಎಂದರು.

ಸಭಾಪತಿ ಮಾತಿಗೆ ಕೆರಳಿದ ಸಾಬಣ್ಣ, ಸಣ್ಣ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಳಂಬ ಮಾಡುತ್ತಿದೆ. ಸಂಶೋಧನೆಯ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಈ ಕುರಿತು ಚರ್ಚೆ ನಡೆಸಲು ಸದನದಲ್ಲೂ ಅವಕಾಶ ನೀಡದಿದ್ದರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿ, ಸಭಾಪತಿ ಪೀಠದತ್ತ ಧಾವಿಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಆದೇಶ ನೀಡಲಾಗಿದೆ. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಅಧ್ಯಯನ ನಡೆಸಲು ಪ್ರಸ್ತಾವ ಸಲ್ಲಿಸಿದೆ. ವರದಿ ಬಂದ ತಕ್ಷಣ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಭಾನಾಯಕ ಎನ್.ಎಸ್.ಬೋಸರಾಜು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.