ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್) ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರುವ ಕುರಿತಂತೆ ಬಿಜೆಪಿ– ಕಾಂಗ್ರೆಸ್ ನಾಯಕರ ಮಧ್ಯೆ ವಾಗ್ವಾದ ಆರಂಭವಾಗಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು, ರಾಜಕೀಯ ಕಲಹಕ್ಕೆ ಕಾರಣವಾಗಿದೆ
ಜನ ನಿಮಗೆ ಅಧಿಕಾರ ಕೊಟ್ಟಿರುವುದು ಬರೀ ರಾಜಕಾರಣ ಮಾಡುವುದಕ್ಕೆ ಅಲ್ಲ. ಆರ್‌ಎಸ್ಎಸ್ ಬಗ್ಗೆ ಟೀಕಿಸುವ ನಿಮ್ಮ ಖಯಾಲಿ ಬಿಟ್ಟು, ನಿಮಗೆ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಿ
ಆರ್.ಅಶೋಕ, ವಿರೋಧ ಪಕ್ಷದ ನಾಯಕ
ಆರ್‌ಎಸ್‌ಎಸ್ ಚಟುವಟಿಕೆಗೆ ನಿರ್ಬಂಧ ಹೇರುವ ವಿಚಾರ ಗೃಹ ಇಲಾಖೆಗೆ ಬಂದರೆ ಅದರ ಸಾಧಕ ಬಾಧಕಗಳ ಬಗ್ಗೆ ಪರಿಶೀಲನೆ ಮಾಡುತ್ತೇವೆ