ಬೆಂಗಳೂರು: ಸರ್ಕಾರದ ಸ್ಥಳಗಳಲ್ಲಿ ಆರ್ಎಸ್ಎಸ್ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

‘ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿ ಮತ್ತು ಅಧಿಕಾರವನ್ನು ನೀಡುತ್ತದೆ. ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ. ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ನ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ತಮ್ಮಲ್ಲಿ ಕೋರಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿದ್ದರಾಮಯ್ಯ ಅವರು ಟಿಪ್ಪಣಿ ಕಳುಹಿಸಿದ್ದಾರೆ.
.ಹಿಂದೂ ಧರ್ಮ ಅಷ್ಟೊಂದು ದುರ್ಬಲವೇ?: ಪ್ರಲ್ಹಾದ ಜೋಶಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ.'ಕಾಣೆಯಾದವರ ಪ್ರಕಟಣೆ' ಎಂಬ ಬಿಜೆಪಿ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.