ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್ಎಸ್: ಉಮಾಪತಿಗೆ ನೂತನ ಜವಾಬ್ದಾರಿ

Published 17 ಡಿಸೆಂಬರ್ 2023, 23:30 IST
Last Updated 17 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕರ್ನಾಟಕ ದಕ್ಷಿಣ
ಪ್ರಾಂತದ ನೂತನ ಪ್ರಾಂತಸಂಘ ಚಾಲಕರಾಗಿ ಜಿ.ಎಸ್. ಉಮಾಪತಿ ಕಾರ್ಯನಿರ್ವಹಿಸಲಿದ್ದಾರೆ. 

ಉಮಾಪತಿ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಆಡನೂರು ಗ್ರಾಮದವರಾಗಿದ್ದಾರೆ. 
ಲೋಕೊಪಯೋಗಿ ಇಲಾಖೆಯಲ್ಲಿ ಅಧೀಕ್ಷಕ ಎಂಜಿನಿಯರ್ ಆಗಿ‌ ಸೇವೆ ಸಲ್ಲಿಸಿ, 2018ರಲ್ಲಿ ಅವರು ನಿವೃತ್ತರಾಗಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಆರ್‌ಎಸ್‌ಎಸ್‌ ಸ್ವಯಂಸೇವಕರಾಗಿದ್ದ ಅವರು, ಬಳಿಕ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಆರ್‌ಎಸ್‌ಎಸ್‌ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ಸಂಘಚಾಲಕರಾಗಿ ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT