ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಕುರಿತ ಕಗ್ಗಂಟು ಪರಿಹಾರಕ್ಕೆ ನ.5ರಂದು ಇನ್ನೊಂದು ಸುತ್ತಿನ ಶಾಂತಿ ಸಭೆ ನಡೆಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ, ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.

ಈ ಕುರಿತ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರು ಗುರುವಾರ ಮುಂದುವರಿಸಿದರು.

'ಶಾಂತಿ ಸಭೆಯಲ್ಲಿ ಅರ್ಜಿದಾರರು ಪಾಲ್ಗೊಂಡಿರಲಿಲ್ಲ' ಎಂದು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿದರು.

'ಶಾಂತಿಸಭೆಯಲ್ಲಿ ಅರ್ಜಿದಾರರು ಯಾಕೆ ಪಾಲ್ಗೊಂಡಿರಲಿಲ್ಲ' ಎಂದು ನ್ಯಾಯಮೂರ್ತಿ ಕಮಲ್ ಪ್ರಶ್ನಿಸಿದರು.

ಇದಕ್ಕೆ ಅರ್ಜಿದಾರ ಪರ ವಕೀಲ ಅರುಣ ಶಾಮ್, 'ಅರ್ಜಿದಾರರ ಸಂಬಂಧಿಕರು ಅಸುನೀಗಿದ್ದರು. ಹೀಗಾಗಿ ಪಾಲ್ಗೊಂಡಿರಲಿಲ್ಲ' ಎಂದರು.

'ಶಾಂತಿ ಸಭೆಯ ಗಂಭೀರತೆಯನ್ನು ಅರ್ಜಿದಾರರು ಯಾಕೆ ಅರಿಯಲಿಲ್ಲ? ಅರ್ಜಿದಾರರ ಪರ ವಕೀಲರು ಸಭೆಯಲ್ಲಿ ಯಾಕೆ ಹಾಜರಾಗಿರಲಿಲ್ಲ' ಎಂದು ಹೈಕೋರ್ಟ್ ಕೇಳಿತು.

ಆಗ ಅರ್ಜಿದಾರರ ಪರ ವಕೀಲ ಅರುಣ ಶಾಮ್, 'ಇನ್ನೊಮ್ಮೆ ಸಭೆ ನಡೆಸಿದರೆ, ಅರ್ಜಿದಾರರು ಪಾಲ್ಗೊಳ್ಳುತ್ತಾರೆ' ಎಂದರು.

ಅದಕ್ಕೆ ಅದಕ್ಕೆ ನ್ಯಾಯಾಲಯ ಇನ್ನೊಂದು ಸುತ್ತಿನ ಸಭೆಗೆ ದಿನಾಂಕ ನಿಗದಿಪಡಿಸಲು ಸಾಧ್ಯವೇ ಎಂದು ನ್ಯಾಯಾಲಯ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಕೇಳಿತು.

ಅದಕ್ಕೆ ಇನ್ನೊಂದು ಸುತ್ತಿನ ಸಭೆ ನಡೆಸಲು ತಮಗೆ ಏನು ಅಭ್ಯಂತರ ಇಲ್ಲ ಎಂದು ಶಶಿಕಿರಣ ಶೆಟ್ಟಿ ಹೇಳಿದರು.

ಆಗ ನ್ಯಾಯಾಲಯ ನವೆಂಬರ್ 5 ರಂದು ಸಂಜೆ 5 ಗಂಟೆಗೆ ಇನ್ನೊಂದು ಶಾಂತಿ ಸಭೆ ನಡೆಸಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿತು. ಜೊತೆಗೆ ಅರ್ಜಿದಾರ ಪರ ಹಿರಿಯ ವಕೀಲರು ಸರ್ಕಾರದ ಪರ ವಕೀಲರು ಹಾಗೂ ಜಿಲ್ಲಾಧಿಕಾರಿ ಸಭೆಯಲ್ಲಿ ಪಾಲ್ಗೊಳ್ಳಲಿ ಎಂದು ನಿರ್ದೇಶನ ನೀಡಿತು.

ಎರಡನೇ ಸುತ್ತಿನ ಸಭೆಯನ್ನು ಬೆಂಗಳೂರಿನಲ್ಲಿ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಅವರ ಕಚೇರಿಯಲ್ಲಿ ನಡೆಸಲು ನ್ಯಾಯಾಲಯ ಒಪ್ಪಿಗೆ ಸೂಚಿಸಿತು. ಬಳಿಕ ವಿಚಾರಣೆಯನ್ನು ನ.7ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.