‘ಇದೇ 19ರಂದು ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಶುರುವಾಗಿ ಮತ್ತೆ ಅಲ್ಲಿಗೇ ಮರಳುವಂತೆ ಪಥಸಂಚಲನ ಮತ್ತು ಆನಂತರದ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ಅಕ್ಟೋಬರ್ 13ರಂದು ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ತಹಶೀಲ್ದಾರ್ ಅಕ್ಟೋಬರ್ 18ರಂದು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಈ ಅರ್ಜಿ ಸಲ್ಲಿಸಲಾಗಿದೆ.