ಬೆಂಗಳೂರು: ‘ಆರ್ಎಸ್ಎಸ್ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು. ತುರ್ತುಪರಿಸ್ಥಿತಿ ಅವಧಿಯಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ ಈ ಪದಗಳನ್ನು ಸೇರ್ಪಡೆಗೊಳಿಸಿತ್ತು’ ಎಂದು ಹೇಳಿದ್ದರು.

ಹೊಸಬಾಳೆಯವರ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಆರ್ಎಸ್ಎಸ್ನವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಂವಿಧಾನ ಬದಲಾವಣೆ ಆಗಬೇಕು ಹಾಗೂ ಮನುಸ್ಮೃತಿ ಜಾರಿ ಆಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ. ಶಾಸನ ಸಭೆಯಲ್ಲಿ ಚರ್ಚೆಯಾಗಿ ಸಂವಿಧಾನ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ’ ಎಂದರು.

‘ಜಾತ್ಯತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ’ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ಸಂಸತ್ತಿನಲ್ಲಿ ಚರ್ಚೆಯಾದ ನಂತರ ಸoವಿಧಾನ ತಿದ್ದುಪಡಿ ಮಾಡಲಾಗಿದೆ. ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ಸಂವಿಧಾನ ರಚನೆ ಆಗಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.