ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಉಪಕಾರ್ಯದರ್ಶಿ–1 ಉಮೇಶ್ ಅವರಿಗೆ ರಾಜ್ಯ ಮಾಹಿತಿ ಆಯೋಗ ₹1 ಲಕ್ಷ ದಂಡ ವಿಧಿಸಿದೆ.

ಎಲ್ಲ ಸಾರ್ವಜನಿಕ ಪ್ರಾಧಿಕಾರಗಳೂ ಕಾರ್ಯನಿರ್ವಹಣೆ ಮತ್ತು ಇತರ ದಾಖಲೆ ಪತ್ರಗಳನ್ನು ತಮ್ಮ ಜಾಲತಾಣದಲ್ಲಿ ಪ್ರದರ್ಶಿಸಬೇಕು ಎಂದು ಮಾಹಿತಿ ಹಕ್ಕು ಕಾಯ್ದೆ ಹೇಳುತ್ತದೆ. ಬಿಡಿಎಯ ಉಪಕಾರ್ಯದರ್ಶಿ–1 ಉಮೇಶ್ ಅವರು ಈ ಕಾರ್ಯದ ಹೊಣೆಗಾರರಾಗಿದ್ದು, ಅವರು ಜಾಲತಾಣದಲ್ಲಿ ಮಾಹಿತಿ ಅಪ್ಡೇಟ್ ಮಾಡಿಸದೇ ಇರುವುದರ ಬಗ್ಗೆ ಆಯೋಗಕ್ಕೆ ನಾಲ್ಕು ದೂರುಗಳು ಸಲ್ಲಿಕೆಯಾಗಿದ್ದವು.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಆಯೋಗವು, ಉಮೇಶ್ ಅವರಿಗೆ ಪ್ರತಿ ಪ್ರಕರಣದಲ್ಲಿ ತಲಾ ₹25,000ದಂತೆ ಒಟ್ಟು ₹1 ಲಕ್ಷ ದಂಡ ವಿಧಿಸಿದೆ.

ಸಾರ್ವಜನಿಕರೊಬ್ಬರು ಮಾಹಿತಿ ಹಕ್ಕು ಕಾಯ್ದೆ ಅಡಿ ಕೋರಿದ್ದ ಮಾಹಿತಿಯನ್ನು ನೀಡದೇ ಇರುವ ಕಾರಣಕ್ಕೆ ಬಿಡಿಎ ಕಾರ್ಯದರ್ಶಿ ಸಿ.ಎಲ್. ಶಿವಕುಮಾರ್ ಅವರಿಗೆ ಆಯೋಗವು ₹25,000 ದಂಡ ವಿಧಿಸಿದೆ. ದಂಡ ಪಾವತಿಸಬೇಕು ಮತ್ತು ಮಾಹಿತಿಯನ್ನು ಕೂಡಲೇ ಒದಗಿಸಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.